Sunday, September 27, 2026

BDA Apartments

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ… BDA JK_Adv BDA Adv
Home Front Page 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ…

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ…

ಬೆಂಗಳೂರು,ಡಿ,3,2019(www.justkannada.in):  ಡಿಸೆಂಬರ್ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ, ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ.

ಇನ್ನು ನಾಳೆ ಅಭ್ಯರ್ಥಿಗಳು ಮತ್ತು ರಾಜಕೀಯ ನಾಯಕರು  ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.  ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿರುವ ಹಿನ್ನೆಲೆ, ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಬೇಕಿದೆ. ಜತೆಗೆ ಮತದಾರರಿಗೆ ಆಮಿಷ ಒಡ್ಡದಂತೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಡಿಸೆಂಬರ್ 5 ರಂದು 15 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು, ಮೂರು ಪಕ್ಷದ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದೆ.

Key words: By-election – 15 assembly constituencies-Campaign-end