Saturday, September 19, 2026

BDA Apartments

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ ಸಾಧ್ಯತೆ...
Home Front Page ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ ಸಾಧ್ಯತೆ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು,ಆಗಸ್ಟ್,16,2024 (www.justkannada.in):  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆಗೆ ಇಂದೇ ಕೇಂದ್ರ ಚುನವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಉಪಚುನಾವಣೆ ದಿನಾಂಕ ಪ್ರಕಟಿಸಲಿದೆ ಎನ್ನಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಬಸವರಾಜ್ ಬೊಮ್ಮಾಯಿ  ಅವರ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರ ಹಾಗೂ ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ ಗಳಿಗೆ ಇಂದು ಉಪಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ಇದೆ.

Key words: by-election, 3 assembly constituencies, announce, today