ಕೆಲ ಸಚಿವರು ಗೋಣಿಚೀಲದಲ್ಲಿ ಹಣ ತುಂಬಿಕೊಂಡು ಬಂದಿದ್ದಾರೆ-  ಡಿ.ಕೆ ಶಿವಕುಮಾರ್ ಗಂಭೀರ ಆರೋಪ.

ಹಾನಗಲ್,ಅಕ್ಟೋಬರ್,21,2021(www.justkannada.in):  ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಕಣ ರಂಗೇರಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭರ್ಜರಿ ಮತಬೇಟೆಗಿಳಿದಿದ್ದು, ಪರಸ್ಪರ ಮೂರು ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪ , ವಾಕ್ಸಮರದ ಮೂಲಕ ಜನರ ತಮ್ಮತ್ತ ಸೆಳೆಯುತ್ತಿದ್ದಾರೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಹಣ ಹಂಚಿಕೆ ಆರೋಪ ಮಾಡಿದ್ದಾರೆ. ಹೌದು, ಹಾನಗಲ್ ತಾಲ್ಲೂಕಿನ ಹೊಂಕಣ ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಡಿ.ಕೆ ಶಿವಕುಮಾರ್, ಬಿಜೆಪಿಯವರು ಹಣ ಹಂಚಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿದ್ದಾರೆ. ಕೆಲ ಸಚಿವರು ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಬಂದಿದ್ದಾರೆ.  ಹೆದ್ದಾರಿಯಲ್ಲಿ ನಿಂತು ಹಣ ಹಂಚಲಾಗುತ್ತಿದೆ.   2 ಸಾವಿರ ರೂ ನೋಟನ್ನ ಇಲ್ಲೆಲ್ಲೋ ನಿನ್ನೆ ಹಂಚಿದ್ರಂತೆ. ಈ ಮೂಲಕ ಬಿಜೆಪಿಯವರು ಹಣದ ಹೊಳೆ ಹರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Key words: by-election- BJP–money-KPCC-president-DK Shivakumar