Wednesday, July 29, 2026

BDA Apartments

Home Front Page ಉಪಚುನಾವಣೆ : 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ- ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಉಪಚುನಾವಣೆ : 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ- ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಳಗಾವಿ,ಅ,16,2019(www.justkannada.in):  ರಾಜ್ಯದಲ್ಲಿ ನಡೆಯುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, 15 ಕ್ಷೇತ್ರಗಳ ಉಪಚುನಾವಣೆ ಮಹತ್ವದ್ದಾಗಿದೆ.  ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಹಾಗೆಯೇ ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಆಗಿದೆ. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. ನೆರೆ ಗ್ರಾಮಗಳನ್ನ ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳುತ್ತೇವೆ. ಇನ್ನು ಸಂಪೂರ್ಣ ಸಾಲಮನ್ನಾ ಮಾಡಲು ಆಗಲ್ಲ. ಹಿಂದಿನ ಸರ್ಕಾರದ ಸಾಲಮನ್ನಾ ಯೋಜನೆ ಮುಂದುವರಿಸಲಾಗುತ್ತದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: by-election-BJP -wins – 15 seats- CM BS Yeddyurappa -confidence