ಡಿ.5 ರಂದು ಉಪಚುನಾವಣೆ ಹಿನ್ನೆಲೆ:  ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ…

ಬೆಂಗಳೂರು,ಡಿ3,2019(www.justkannada.in): ಡಿಸೆಂಬರ್‌ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ  ಹಿನ್ನೆಲೆ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ  ಸರ್ಕಾರಿ ಕಛೇರಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿಸೆಂಬರ್ 5 ರಂದು ಹುಣಸೂರು, ಕೆ.ಆರ್ ಪೇಟೆ, ಶಿವಾಜಿನಗರ, ಕೆ.ಆರ್ ಪುರಂ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಕೆ.ಆರ್ ಪೇಟೆ, ರಾಣಿಬೆನ್ನೂರು, ಹಿರೇಕೆರೂರು, ಅಥಣಿ, ಕಾಗವಾಡ, ಯಲ್ಲಾಪುರ, ಗೋಕಾಕ್, ಚಿಕ್ಕಬಳ್ಳಾಪುರ, ಹೊಸಕೋಟೆ, ಹೊಸಪೇಟೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಹೀಗಾಗಿ ಅಯಾಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ, ಅನುದಾನಿತ ಸರ್ಕಾರಿ ಶಾಲಾಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.

ಅಲ್ಲದೇ ಖಾಸಗಿ ಕಾರ್ಖಾನೆಗಳು, ಉದ್ಯಮಗಳು ಅಂದು ನೌಕರರಿಗೆ ವೇತನ ಸಹಿತ ರಜೆ ನೀಡಬೇಕಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ಅನುಕೂಲವಾಗುವಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಡಿಸೆಂಬರ್ 5 ರಂದು ಮತದಾನ ನಡೆದರೇ ಡಿಸೆಂಬರ್ 9 ರಂದು ಫಲಿತಾಂಶ ಹೊರ ಬೀಳಲಿದೆ.

Key words: by-election -December 5-Government –leave-office-school and college