Wednesday, July 29, 2026

BDA Apartments

Home Front Page ಉಪಚುನಾವಣೆ ಸೋಲು ಹಿನ್ನೆಲೆ: ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…

ಉಪಚುನಾವಣೆ ಸೋಲು ಹಿನ್ನೆಲೆ: ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…

ಬೆಂಗಳೂರು,ಡಿ,9,2019(www.justkannada.in):  ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲುಂಟಾದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಶಾಸಕಾಂಗ್ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಪಕ್ಷದ ಹಿತದೃಷ್ಠಿಯಿಂದ ಸಿಎಲ್ ಪಿ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಗೆ ರಾಜೀನಾಮೆ ಪತ್ರ ರವಾನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೂ ಪತ್ರ ಕಳುಹಿಸುವೆ ಎಂದು ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ  ಜನರು ನೀಡಿದ ತೀರ್ಪನ್ನ ಒಪ್ಪಿಕೊಂಡಿದ್ದೇನೆ.  ಪಕ್ಷಾಂತರಿಗಳಿಗೆ ಜನರು ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದವು ಆದರೆ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಬೇಸರ ಹೊರ ಹಾಕಿದರು.

Key words: by-election- defeat-former cm-Siddaramaiah- resigns -CLP leader