ಡಿ.5 ರಂದು ಉಪಚುನಾವಣೆ ಹಿನ್ನೆಲೆ: ಹೈಕಮಾಂಡ್ ಜತೆ ಚರ್ಚಿಸಿಲು ನವದೆಹಲಿ ತೆರಳಲಿರುವ ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು, ಅ,15,2019(www.justkannada.in):   ಡಿಸೆಂಬರ್ 5 ರಂದು ರಾಜ್ಯದಲ್ಲಿ  ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಸೇರಿ ಹಲವು ವಿಚಾರಗಳ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಲು ಮಾಜಿ ಸಿಎಂ ಸಿದ್ಧರಾಮಯ್ಯ ನವದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ರಾತ್ರಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ  ವೇಣುಗೋಪಾಲ್ ಜತೆ ಸಿದ್ಧರಾಮಯ್ಯ ನವದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ ಸಿದ್ಧರಾಮಯ್ಯ, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಉಪಚುನಾವಣೆ ಟಿಕೆಟ್ ಮಾತುಕತೆ, ಪ್ರಚಾರ, ಉಪಚುನಾವಣೆ ಉಸ್ತುವಾರಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ ವಿಪಕ್ಷ ನಾಯಕ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡಿರುವ ಹೈಕಮಾಂಡ್‌ಗೆ ಧನ್ಯವಾದ ಅರ್ಪಿಸಲು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರೆ.  ಇನ್ನು ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹಿರಿಯ ನಾಯಕರ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ.

ಇನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನಿವಾಸದ ಮೇಲೆ ಐಟಿ ದಾಳಿಯಾಗಿರುವ ಹಿನ್ನೆಲೆ , ಉಪಚುನಾವಣೆ ಉಸ್ತುವಾರಿ ಮತ್ತು ಟಿಕೆಟ್ ಹಂಚಿಕೆ ಎರಡೂ ಜವಾಬ್ದಾರಿ ಸಿದ್ದರಾಮಯ್ಯರಿಗೆ ಸಿಗುವ ಸಾಧ್ಯತೆ ಹೆಚ್ಚಿದೆ.

Key words: by-election -Former CM- Siddaramaiah – New Delhi – discuss – High Command