ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ಧ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿ.

0
1

ಬೆಂಗಳೂರು,ಜುಲೈ,18,2022(www.justkannada.in): ಸಿ.ಎಂ ಇಬ್ರಾಹಿಂ  ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.

ಅಗಸ್ಟ್ 11 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜುಲೈ 25ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆಗಸ್ಟ್​ 1 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 4ರೊಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ. ಆಗಸ್ಟ್ 11 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4ರವರೆಗೆ ಮತದಾನ ನಡೆಯಲಿದ್ದು,  ಅಂದೇ ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಸಿ.ಎಂ ಇಬ್ರಾಹಿಂ ಇತ್ತೀಚೆಗೆ ತಮ್ಮ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ  ತೆರವಾದ ವಿಧಾನಪರಿಷತ್  ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Key words: by-election – Legislative Council – resignation – CM ibrahim