ಉಪಚುನಾವಣೆ: ರಮೇಶ್ ಜಾರಕಿಹೊಳಿ ಪ್ರಚಾರಕ್ಕೆ ಬರುವ ಕುರಿತು ಸಚಿವ ಉಮೇಶ್ ಕತ್ತಿ  ಪ್ರತಿಕ್ರಿಯಿಸಿದ್ದು ಹೀಗೆ…

ಬೆಳಗಾವಿ,ಮಾರ್ಚ್ 30,2021(www.justkannada.in): ಬೆಳಗಾವಿ ಉಪಚುನಾವಣೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರಕ್ಕೆ  ಬರುತ್ತಾರೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.Government,Social,Economic,Educational,survey,Report,Should,receive,Former CM,Siddaramaiah 

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಮಂಗಳ ಅಗಂಡಿ ಅವರು ನಾಮಪತ್ರ ಸಲ್ಲಿಸಿದರು.  ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ದಿವಂಗತ ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ. ಮಂಗಳ ಅಗಂಡಿ ಅವರು ಎರಡೂವರೆ ಲಕ್ಷ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.By-election-Minister- Umesh katti  -Ramesh jarakiholi- campaign.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಚಾರಕ್ಕೆ  ಬರಲಿದ್ದಾರೆ. ಬಾಲಚಂದ್ರ ಜಾರಕಿಹೊಳಿ, ಭೀಮೇಶ್ ಜಾರಕಿಹೊಳಿ ಎಲ್ಲರೂ ಬರುತ್ತಾರೆ ಎಂದು ತಿಳಿಸಿದರು. ಸಿ.ಡಿ ಪ್ರಕರಣಕ್ಕೆ ಸಂಬಂಸಿದಂತೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ವರದಿ ಬಂದ ಮೇಲೆ ಚರ್ಚೆ ಮಾಡೋಣ. ಈಗ ಉಪಚುನಾವಣೆ ಬಗ್ಗೆ ಚರ್ಚಿಸಬೇಕು ಎಂದು ಉಮೇಶ್ ಕತ್ತಿ ಹೇಳಿದರು.

Key words: By-election-Minister- Umesh katti  -Ramesh jarakiholi- campaign.