ಉಪ ಚುನಾವಣಾ ಫಲಿತಾಂಶ: ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ…

ನವದೆಹಲಿ,ನವೆಂಬರ್,10,2020(www.justkannada.in):  ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು  ಹೊರಬೀಳುತ್ತಿದೆ. kannada-journalist-media-fourth-estate-under-loss

ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದರೇ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ.by-election-result-bjp-leads-karnataka-madhya-pradesh-gujarat

ಮಧ್ಯ ಪ್ರದೇಶದ 28 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು  ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್ ನ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

Key words: By-election –result-BJP- leads –Karnataka-Madhya Pradesh – Gujarat