ಎಲ್ಲಾ ಕಡೆ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ತೇವೆ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

ಬೆಂಗಳೂರು,ಡಿ,7,2019(www.justkannada.in):  ಡಿಸೆಂಬರ್ 9 ರಂದು ಉಪಚುನಾವಣಾ ಫಲಿತಾಂಶ ಹೊರ ಬೀಳಲಿದ್ದು, ಈ ಹಿನ್ನೆಲೆ ಎಲ್ಲಾ ಕ್ಷೇತ್ರಗಳಲ್ಲೂ ನಾವು 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸೋಮುವಾರ ಸಂಜೆ ಉಪಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರಿಗೂ ತಿಳಿಯುತ್ತದೆ. ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.

ಹಾಗೆಯೇ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ. ಉಪಚುನಾವಣೆ ಬಳಿ ಈ ಬಗ್ಗೆ ನಿರ್ಧರಿಸುತ್ತೇವೆ. ಯಾರಿಗೆ  ಸಚಿವ ಸ್ಥಾನ ನೀಡಬೇಕು ಎಂದುಬುದರ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

Key words: by election- result- bjp-win-15 constituency-CM BS Yeddyurappa -Confidence.