ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ:  ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ…

ಬೆಂಗಳೂರು, ಅಕ್ಟೋಬರ್,13,2020(www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ಆರ್. ಆರ್ ನಗರ ಉಪಚುನಾವಣೆಯ ಬಿಜೆಪಿ ಟಿಕೆಟ್ ಕೊನೆಗೂ ಮುನಿರತ್ನ ಪಾಲಾಗಿದೆ.  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.jk-logo-justkannada-logo

ಇಂದು ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನ ಹೈಕಮಾಂಡ್ ಘೋಷಣೆ ಮಾಡಿದೆ. ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರಿಗೆ ಟಿಕೆಟ್ ನೀಡಲಾಗಿದೆ.  ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ಹೆಸರನ್ನ ಹೈಕಮಾಂಡ್ ಘೋಷಣೆ ಮಾಡಿದೆ.By-election - RR nagar- Shira constituency- BJP- candidates -announce

Key words: By-election – RR nagar- Shira constituency- BJP- candidates -announce