Thursday, August 13, 2026

BDA Apartments

Home Front Page ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್…

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್…

ಬೆಂಗಳೂರು,ಮಾರ್ಚ್,16,2021(www.justkannada.in):  ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ.jk

ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು,  ಮೇ 2 ರಂದು ಫಲಿತಾಂಶ ಹೊರಬೀಳಲಿದೆ.by-election - three constituencies – state- april 17-voting

ಸಮ್ಮಿಶ್ರ ಸರ್ಕಾರದ ವೇಳೆ ಪ್ರತಾಪ್ ಗೌಡ ಪಾಟೀಲ್  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅನರ್ಹಗೊಂಡಿದ್ದ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇವರ ರಾಜೀನಾಮೆಯಿಂದ  ತೆರವಾಗಿರುವ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇನ್ನು  ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಕ್ಷೇತ್ರ. ಬಿ. ನಾರಾಯಣರಾವ್ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.

Key words: by-election – three constituencies – state- april 17-voting