ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆ ಗೆಲುವು ಖಚಿತ….

ಉತ್ತರ ಕನ್ನಡ,ಡಿ,9,2019(www.justkannada.in): ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆ ಗೆಲುವು ಬಹುತೇಕ ಖಚಿತವಾಗಿದೆ.

14ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭಾರಿ ಮುನ್ನಡೆ ಕಾಯ್ದುಕೊಡು ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.  ಶಿವರಾಂ ಹೆಬ್ಬಾರ್ 14ನೇ ಸುತ್ತಿನಲ್ಲಿ 27,061 ಮತಗಳ ಮುನ್ನಡೆಯಲ್ಲಿ ಮುನ್ನುಗ್ಗುತ್ತಿದ್ದು ಇನ್ನ ಮೂರು ಸುತ್ತಿನ ಎಣಿಕೆ ಬಾಕಿ ಇದೆ.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದು ಗೆಲುವಿನ ಸನಿಹದಲ್ಲಿದ್ದಾರೆ.

Key words: by election- yallapur-BJP candidate- Shivaram Hebbar -sure – win