Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್

ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್

ಚಿತ್ರದುರ್ಗ,ಮಾರ್ಚ್,31,2026 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಲಕ್ಷ ಕೋಟಿ  ರೂಪಾಯಿಗೂ ಅಧಿಕ ಸಾಲ ಮಾಡಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ  4 ಲಕ್ಷ ಕೋಟಿ ರೂ. ಗೂ ಅಧಿಕ ಸಾಲ ಮಾಡಿದ್ದಾರೆ ಒಬ್ಬರ ತಲೆ ಮೇಲೆ ತಲಾ 80 ಸಾವಿರ ರೂ. ಸಾಲದ ಹೊರೆ ಇದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದಾರೆ.  ರಾಜ್ಯದ ಜನರು ಈ ಸರ್ಕಾರ ಕಿತ್ತೊಗೆಯುವ ಹಾದಿಯಲ್ಲಿ ಇದ್ದಾರೆ.  ಜನರು ಬಿಜೆಪಿ ಬೆಂಬಲಿಸಿ ಮತ ಹಾಕ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಅಧಿಕಾರದಲ್ಲಿದ್ದಾಗ ಹೆಚ್ಚು ಸಾಲ ಮಾಡದೇ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದವು. ಈ ಸರ್ಕಾರ 3 ವರ್ಷದಿಂದ  ಯಾವುದೇ ಅಭಿವೃದ್ದಿ ಮಾಡಿಲ್ಲ. ಕೇಂದ್ರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಜಾಸ್ತಿ ಮಾಡಿದೆ. ಉಪಚುನಾವಣೆ ನಂತರ ಜನರ ಮೇಲೆ ಎಲ್ಲಾ ತೆರಿಗೆ ಹಾಕುತ್ತಾರೆ.  ಜನ ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದರು.

Key words: Congress government, lesson, by-elections, R. Ashok