ಬೆಂಗಳೂರು,ಮೇ,1,2025 (www.justkannada.in): ಜಾತಿ ಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರಕ್ಕೆ ಇದೀಗ ಕೇಂದ್ರ ಸರ್ಕಾರ ಇತಿಶ್ರೀ ಹಾಡಲು ಮುಂದಾಗಿದೆ. ಎಲ್ಲಾ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಕೊಡಬೇಕು ಎಂಬ ದೃಷ್ಟಿಕೋನದಿಂದ ಜಾತಿಗಣತಿ ನಡೆಸಲು ಪ್ರಧಾನಿ ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ ಪ್ರಮುಖ ನಿರ್ಧಾರ ಮಾಡಿದ್ದು ಸ್ವಾಗತಾರ್ಹ, ಭಾರತದಲ್ಲಿ 1931ರ ನಂತರ ಯಾವತ್ತೂ ಜಾತಿ ಜನಗಣತಿ ಆಗಿರಲಿಲ್ಲ; ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು. ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ನರೇಂದ್ರ ಮೋದಿ ಅವರ ಉದ್ದೇಶ ಎಂದರು.
ಜನಗಣತಿ ಜೊತೆಗೆ ಜಾತಿ ಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಇದೀಗ ಇದಕ್ಕೆ ಕೇಂದ್ರ ಸರ್ಕಾರ ಇತಿಶ್ರೀ ಹಾಡಲಿದೆ ಎಂದು ವಿಜಯೇಂದ್ರ ತಿಳಿಸಿದರು.
Key words: caste census, CM Siddaramaiah, BY Vijayendra