ಶಿವಮೊಗ್ಗ, ಮೇ,13,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ವಿರುದ್ದ ನಡೆಸಿದ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬಿಜೆಪಿ ತಿರಂಗಯಾತ್ರೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆ ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗಯಾತ್ರೆ ಮಾಡುತ್ತೇವೆ. ಮೇ 15 ರಂದು ಮಂಗಳೂರು ಮೈಸೂರು ಸೇರಿ ಹಲವೆಡೆ ತಿರಂಗ ಯಾತ್ರೆ ನಡೆಯಲಿದೆ. ಮೇ16ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಪಾಕಿಸ್ತಾನಕ್ಕೆ ನುಗ್ಗಿ ಭಾರತೀಯ ಸೇನೆ ಹೊಡೆದಿದೆ. ಉಗ್ರರ ಅಡಗುತಾಣ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಈ ಹಿಂದೆ ಇಂತಹ ಅಪರೇಷನ್ ಆಗಿರಲಿಲ್ಲ ದಾಳಿಯಲ್ಲಿ 8 ಪ್ರಮುಖ ಭಯೋತ್ಪಾದಕರನ್ನ ಹತ್ಯೆ ಮಾಡಲಾಗಿದೆ. ಹೀಗಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ಬಿವೈ ವಿಜಯೇಂದ್ರ ತಿಳಿಸಿದರು.
Key words: Tiranga Yatra, across , state, tomorrow, BY Vijayendra