ಮೂರ್ಖರ ಮಾತನ್ನ ನಂಬಿ ರಾಹುಲ್ ಗಾಂಧಿ ಪ್ರತಿಭಟನೆ- ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು,ಆಗಸ್ಟ್,8,2025 (www.justkannada.in):  ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ,,  ಮೂರ್ಖರ ಮಾತನ್ನ ನಂಬಿ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2019ರಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು.  ಈ ಬಾರಿಯ ಚುನಾವಣೆಯಲ್ಲಿ 17 ಸ್ಥಾನ ಗೆದ್ದಿದ್ದೇವೆ.  ಆಗ ಚುನವಣೆ ಅಕ್ರಮ ನಡೆದಿದೆ ಎನ್ನಬಹುದಾ? ಎಂದು ಪ್ರಶ್ನಿಸಿದರು.

ಚುನಾವಣಾ ಅಕ್ರಮ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಮಹದೇವಪುರ ಕ್ಷೇತ್ರದ ಬಗ್ಗೆ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿ ತಿಳಿಸಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.

Key words: Bangalore, Rahul Gandhi, protests, BY Vijayendra