ಬೆಂಗಳೂರು,ಆಗಸ್ಟ್,28,2025 (www.justkannada.in): ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಕೂಡಲೇ ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಯಾರನ್ನೋ ಖುಷಿಪಡಿಸಲು ಈ ರೀತಿ ಹೇಳಿಕೆ ನೀಡಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ. ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆಂಬುದು ನಮಗೂ ಗೊತ್ತಿದೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ. ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.
ಸದನದಲ್ಲಿ ಡಿಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆ ಹೇಳಿದ್ದಕ್ಕೆ ದೆಹಲಿ ಹೈಕಮಾಂಡಿನ ಒತ್ತಡ ಬಂದಿದೆ. ನಂತರ ಕ್ಷಮಾಪಣೆ ಕೇಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನತ್ತು ಒಡೆದಾಳುವ ನೀತಿ . ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರ ನಡೆಯುತ್ತಿದ್ದರೂ ಬಾಯಿ ಮುಚ್ಚಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಲಿಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
Key words: BY Vijayendra, DK Shivakumar, statement