RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಅಕ್ಟೋಬರ್,18,2025 (www.justkannada.in):  ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣಕುಮಾರ್‌ ಕೆ.ಪಿ. ಅವರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ನಡೆಗೆ  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ, ರಾಯಚೂರು ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ.ಪಿ ಅವರನ್ನು ಆರ್‌ಎಸ್‌ಎಸ್‌ ಶತಮಾನೋತ್ಸವ ಪಥಸಂಚನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಅಮಾನತುಗೊಳಿಸುವ ಮೂಲಕ ದೇಶಭಕ್ತಿ ಮನಸ್ಥಿತಿಗಳ ಮೇಲೆ ಸರ್ಕಾರಿ ಯಂತ್ರ ಬಳಸಿಕೊಂಡು ದಾಳಿ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದು ಕಾಂಗ್ರೆಸ್‌ ಪಕ್ಷದ ವಿಕೃತಿ ಹಾಗೂ ಹಿಂದೂ ವಿರೋಧಿ ಮನಸ್ಥಿತಿ , ಸರ್ಕಾರದ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ. ಕೂಡಲೇ ಈ ಸೇಡಿನ ಅಮಾನತು ಹಿಂಪಡೆದು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ದ್ವೇಷದ ರಾಜಕಾರಣಕ್ಕೆ ಸಂವಿಧಾನಿಕ ಮಾರ್ಗದಲ್ಲಿ ಜನತಂತ್ರ ವ್ಯವಸ್ಥೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

Key words: PDO, suspended, RSS, BY Vijayendra