ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು: ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ- ಬಿವೈ ವಿಜಯೇಂದ್ರ

ಬೆಳಗಾವಿ,ನವೆಂಬರ್,4,2025 (www.justkannada.in): ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಸಂಕಷ್ಟ ಆಲಿಸುತ್ತಿಲ್ಲ. ಹೀಗಾಗಿ ನಾವು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ಕಬ್ಬಿಗೆ ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ.  ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಕಬ್ಬಿನ ಬೆಳೆಗಾರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು  ಬಂದಿದ್ದೇವೆ ಎಂದರು.

‘ಭಾರೀ  ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ತೊಂದರೆಗೀಡಾದಾಗ ಸಹ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಮತ್ತು ಕೃಷಿ ಸಚಿವರು ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡಲಿಲ್ಲ. ಸರ್ಕಾರಕ್ಕೆ ರೈತರ ಪರ ಕಾಳಜಿ ಇಲ್ಲ. ಹಾಗಾಗಿ ಇಂದು ಕಬ್ಬಿನ ದರಕ್ಕಾಗಿ ರೈತರು ಮತ್ತೆ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: Sugarcane, growers, government, BY Vijayendra