ರಾಜ್ಯ ಸರ್ಕಾರ ಜನರ ತೆರಿಗೆ ಹಣ ದುರುಪಯೋಗ ಮಾಡಿಕೊಂಡಿದೆ- ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಜನವರಿ,29,2026 (www.justkannada.in):  ವಿಬಿ ಜಿ ರಾಮ್ ಜಿ ಯೋಜನೆ ವಿರುದ್ದ ರಾಜ್ಯ ಸರ್ಕಾರ ಜಾಹೀರಾತು ನೀಡಿದ ವಿಚಾರಕ್ಕೆ  ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಕೇಂದ್ರ ಸರ್ಕಾರದ ಬಗ್ಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಅರಾಜಕತೆ ಸೃಷ್ಠಿಸುವ ಕೆಲಸಕ್ಕೆ ಕೈಹಾಕಿದೆ.  ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ದ ಜನರನ್ನ ಎತ್ತಿಕಟ್ಟುವ ಕೆಲಸಕ್ಕೆ ಕೈ ಹಾಕಿದೆ.  ರಾಜ್ಯ ಸರ್ಕಾರ ತನ್ನ ಸಾಧನೆಯ ಕುರಿತು ಜಾಹೀರಾತು ಕೊಡಲಿ  ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words:  State government, advertisement , VB Ji Ram Ji Yojana, BY Vijayendra