ಬಿಡದಿ ಟೌನ್ ಶಿಪ್ : ಸರ್ಕಾರದ ಧೋರಣೆ ಖಂಡಿಸಿ ರಾಹುಲ್ ಗಾಂಧಿ ರೈತರ ಪರ  ನಿಲ್ಲಲಿ- ಬಿವೈ ವಿಜಯೇಂದ್ರ

ಗದಗ,ಜುಲೈ,16,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರ ಪರ  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಡದಿ ಟೌನ್ ಶಿಪ್ ವಿಚಾರದಲ್ಲಿ ರಾಹುಲ್ ಗಾಂಧಿ ರೈತರಪರ ನಿಲ್ಲಬೇಕು. ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ ವಿದೇಶಿ ಪ್ರವಾಸದಲ್ಲಿದ್ದಾರೆ ರಾಹುಲ್ ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಧೋರಣೆಯನ್ನ ರಾಹುಲ್ ಗಾಂಧಿ ಖಂಡಿಸಬೇಕು  ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಧೋರಣೆ ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ.  ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ  ಎಂದರು.

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿ.ವೈ ವಿಜಯೇಂದ್ರ,  ಕನಕಪುರದಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಏರ್ ಪೋರ್ಟ್ ಮಾಡಿದರೆ ಅನುಕೂಲ. ಮಧ್ಯ ಕರ್ನಾಟಕ ಉತ್ತರ ಕರ್ನಾಟಕಕ್ಕೆ ಅನುಕೂಲ ಆಗುತ್ತೆ, ರಿಯಲ್ ಎಸ್ಟೇಟ್ ದಂಧಗೋಸ್ಕರ ಕನಕಪುರದಲ್ಲಿ ಮಾಡಬಾರದು  ಎಂದು ಟಾಂಗ್ ಕೊಟ್ಟರು.

Key words:   Bidadi Township, Rahul Gandhi, stand up, farmers, BY Vijayendra