Thursday, September 3, 2026

BDA Apartments

Home Front Page ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ-ಬಿ.ವೈ ವಿಜಯೇಂದ್ರ ಆಗ್ರಹ

ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ-ಬಿ.ವೈ ವಿಜಯೇಂದ್ರ ಆಗ್ರಹ

ರಾಯಚೂರು,ಸೆಪ್ಟಂಬರ್,3,2026 (www.justkannada.in):  ಬರಪೀಡಿತ ರೈತರ 5 ಲಕ್ಷ ರೂ.ವರೆಗೆ ಬೆಳೆ ಸಾಲ ಮನ್ನಾ ಮಾಡಿ, ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ,ವೈ ವಿಜಯೇಂದ್ರ  ಒತ್ತಾಯಿಸಿದರು.

ವಾಲ್ಮೀಕಿ ನಿಗಮ ಹಗರಣದ ವಿರುದ್ದ ಬಿಜೆಪಿ ಪಾದಯಾತ್ರೆ ನಡೆಸುತ್ತಿದ್ದು ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದ ರೈತರು ಗಂಭೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಆದರೆ ಕಾಂಗ್ರೆಸ್‌‍ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.  ಅಲ್ಲದೆ ಎಸ್‌‍ಸಿಪಿ-ಟಿಎಸ್‌‍ಪಿ ಹಣವನ್ನು ಸರ್ಕಾರ ಗ್ಯಾರಂಟಿಗಳಿಗೆ ಬಳಸುತ್ತಿದೆ. ಸರ್ಕಾರದ ವೈಫಲ್ಯಗಳು, ದಲಿತರು ಹಾಗೂ ಶೋಷಿತ ಸಮುದಾಯಗಳನ್ನು ಕೇವಲ ವೋಟ್‌ ಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌‍ಸಿಪಿ-ಟಿಎಸ್‌‍ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ  ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಸುಮಾರು 190ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರಪೀಡಿತ ಪ್ರದೇಶಗಳ ರೈತರ ಬೆಳೆ ಸಾಲವನ್ನು 5 ಲಕ್ಷದವರೆಗೆ ಮನ್ನಾ ಮಾಡಬೇಕು . ಅನ್ನದಾತನ ಸಂಕಷ್ಟಕ್ಕೆ ಸರ್ಕಾರ ಮಿಡಿಯುವ ಕಾಳಜಿ ತೋರಬೇಕು. ರಾಜ್ಯದ ರೈತರ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ರಾಜ್ಯ ಸರ್ಕಾರ ವಿಶೇಷ ಅಧಿವೇಶನವನ್ನು ಕರೆಯಬೇಕು.  ಎಂದು ವಿಜಯೇಂದ್ರ  ಒತ್ತಾಯಿಸಿದರು.

Key words: special session, discuss, farmers, problems, BY Vijayendra