Sunday, September 20, 2026

BDA Apartments

Home Front Page ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ವಿಚಾರ: ಸಿಎಂ ಬೊಮ್ಮಾಯಿ ಹೇಳಿದ್ದೇನು..?

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ವಿಚಾರ: ಸಿಎಂ ಬೊಮ್ಮಾಯಿ ಹೇಳಿದ್ದೇನು..?

ದೊಡ್ಡಬಳ್ಳಾಪುರ,ಮಾರ್ಚ್,31,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು ಈ ಮಧ್ಯೆ ಸಿದ್ಧರಾಮಯ್ಯ ವಿರುದ್ಧ  ವರುಣಾ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ  ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ವರುಣಾದಲ್ಲಿ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಜನರ ಬೇಡಿಕೆ. ಈ ಬಗ್ಗೆ  ಪಾರ್ಲಿಮೆಂಟರಿ ಬೋರ್ಡ್ ಬಿಎಸ್  ಯಡಿಯೂರಪ್ಪ ಅಂತಿಮ ತೀರ್ಮಾನ ಮಾಡುತ್ತಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ ಪೈಪೋಟಿ ಕೊಡುತ್ತೇವೆ ಎಂದು ತಿಳಿಸಿದರು.ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ವಿಚಾರ cm bommai cm bommai 5

ಹಾಗೆಯೇ ಮಾತು ಮುಂದುವರೆಸಿದ ಸಿಎಂ ಬೊಮ್ಮಾಯಿ, ಬರೆದಿಟ್ಟುಕೊಳ್ಳಿ ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ. ಘಾಟಿ ಸುಬ್ರಹ್ಮಣ್ಯ  ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆ ನಡೆಯುತ್ತಿವೆ. ಇನ್ನೂ ಒಂದುವರೆ ತಿಂಗಳು ಸಮಯವಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇಲ್ಲ ಎಂದರು.

Key words: BY Vijayendra- contest -Varuna –Constituency-CM Bommai –reaction