Friday, August 7, 2026

BDA Apartments

Home Front Page ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ- ಜಗದೀಶ್ ಶೆಟ್ಟರ್ ಭೇಟಿ ಬಳಿಕ ಬಿವೈ ವಿಜಯೇಂದ್ರ ಸ್ಪಷ್ಟನೆ.

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ- ಜಗದೀಶ್ ಶೆಟ್ಟರ್ ಭೇಟಿ ಬಳಿಕ ಬಿವೈ ವಿಜಯೇಂದ್ರ ಸ್ಪಷ್ಟನೆ.

ಹುಬ್ಬಳ್ಳಿ,ಮಾರ್ಚ್,14,2022(www.justkannada.in):  ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನು ಸಂಪುಟ ಸೇರ್ಪಡೆ ಕೇವಲ ಊಹಾಪೂಹ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನ ಭೇಟಿಯಾಗಿ  ಬಿವೈ ವಿಜಯೇಂದ್ರ ಮಾತುಕತೆ ನಡೆಸಿದರು. ಸಂಪುಟ ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಭೇಟಿ ಸಾಕಷ್ಟು ಕುತೂಹಲ ಉಂಟು ಮಾಡಿದೆ.

ಶೆಟ್ಟರ್ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಬಿವೈ ವಿಜಯೇಂದ್ರ,  ಸಂಪುಟ ಸೇರ್ಪಡೆ ಊಹಾಪೂಹ. ನಾಯಕರ ಬಳಿ ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ನಾನು ಉಪಾಧ್ಯಕ್ಷನಾಗಿ ಕೆಲಸ ಮುಂದುವರೆಯುವೆ.  ನಾನು ಯಾವುದೇ ಆಸೆ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ.  ವೈಯಕ್ತಿಕ ವಿಚಾರಕ್ಕಾಗಿ ನಾನು ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

Key words: BY Vijayendra-meet- Jagadish Shettar.