ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚ:  ಬೈ ಎಲೆಕ್ಷನ್ ನಲ್ಲಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ- ಸವಾಲು ಹಾಕಿದ ಸಚಿವ ಕೆ.ಎಸ್ ಈಶ್ವರಪ್ಪ…

ಹುಬ್ಬಳ್ಳಿ,ನ,29,2019(www.justkannada.in): ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೇ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ. ಒಂದು ವೇಳೆ ಗೆದ್ದರೇ ನೀವು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತೀರಾ..? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ,  ಉಪ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆಯನ್ನು ಭ್ರಮೆ ಅನ್ನಬೇಕೋ, ಕನಸು ಅನ್ನಬೇಕೋ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಒಬ್ಬ ಹುಚ್ಚ, ಹುಚ್ಚಿನಿಂದ ಹೊರ ಬಂದಿಲ್ಲ. ಹುಚ್ಚುತನದಿಂದ ಹೊರ ಬರಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಜೊತೆ ಯಾವುದೇ ಕಾಂಗ್ರೆಸ್ ನಾಯಕರಿಲ್ಲ. ಅವರೊಬ್ಬ ಸ್ವಾರ್ಥಿ, ರಾಜ್ಯದಲ್ಲಿ ಯಾರನ್ನು ಬೆಳೆಯಲು ಬಿಡುತ್ತಿಲ್ಲ. ಯಾವ ಕುರುಬ, ಹಿಂದುಳಿದ ನಾಯಕರನ್ನು ಬೆಳೆಸಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದರು.

key words: Bye-Election-8 seat – Minister -KS Eshwarappa – Challenged-siddaramaiah