ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ, ಡಿ.ಕೆಶಿ ಒಳ ರಾಜಕೀಯ ಕಾರಣ : ನಳಿನ್ ಕುಮಾರ್ ಕಟೀಲ್

ಉಡುಪಿ,ನವೆಂಬರ್,12,2020(www.justkannada.in) : ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವಿನ ಒಳ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.kannada-journalist-media-fourth-estate-under-loss

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಸೀಟಿಗೆ ಟವೆಲ್ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜರಾಜೇಶ್ವರಿ ನಗರ, ಶಿರಾದಲ್ಲಿ ಗೆಲುವಿನ ಬದಲು ಪರಸ್ಪರ ಸೋಲಿಗೆ ಒಳರಾಜಕೀಯ ನಡೆಸಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಸಿಎಂ ಗೆ ಬಿಟ್ಟಿದ್ದು

ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.

By,election,Congress,Defeat,Siddaramaiah,D.K.shi,inner,political,reason,Nalin Kumar Kateel

key words  : By-election-Congress-Defeat-Siddaramaiah-D.K.shi-inner-political-reason-Nalin Kumar Kateel