ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೋಕ್.

ಬೆಂಗಳೂರು,ಜುಲೈ,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ಮಧ್ಯೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಹುದ್ದೆಯಿಂದ ಸಿ.ಟಿ. ರವಿ ಅವರಿಗೆ ಕೋಕ್ ನೀಡಲಾಗಿದೆ.

ಬಿಜೆಪಿ  ನಡೆ ಬಾರಿ ಕುತೂಹಲ ಮೂಡಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ನಡುವೆ ಮಾಜಿ ಸಚಿವ ಸಿ.ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ.

ಇನ್ನು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್  ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Key words: C.T. Ravi – BJP -National –General- Secretary- Removed -from -the post