ಸರ್ಕಾರಿ ಸ್ಥಳಗಳಲ್ಲಿ RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್:  ಸಚಿವ ಸಂಪುಟದಲ್ಲಿ ನಿರ್ಧಾರ

ಬೆಂಗಳೂರು, ಅಕ್ಟೋಬರ್, 16,2025 (www.justkannada.in): ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಸೇರಿ ಖಾಸಗಿ ಸಂಘಸಂಸ್ಥೆಗಳ ಚಟುವಟಿಕೆಗೆ ರಾಜ್ಯ ಸರ್ಕಾರ ಬ್ರೇಕ್  ಹಾಕಿದ್ದು ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಸಂಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಆರ್ ಎಸ್ ಎಸ್ ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್‌ ಪದ ಬಳಕೆ ಮಾಡದೇ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿದೆ.

ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

Key words: Cabinet, decides, RSS , private organizations, activities