Wednesday, July 29, 2026

BDA Apartments

Home Front Page ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ…

ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ…

ಹುಬ್ಬಳ್ಳಿ,ಜ,28,2020(www.justkannada.in): ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳನ್ನ ಪರಿಹರಿಸಬೇಕಿದೆ. ಹೀಗಾಗಿ ಈ ತಿಂಗಳೂಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಹಸನದಂತಿದೆ. ಸಂಪುಟ ವಿಸ್ತರಣೆ ಸಿಎಂ ಬಿಎಸ್ ವೈ ಪರಮಾಧಿಕಾರ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳನ್ನ ಬಗೆಹರಿಸಬೇಕಿದೆ. ಹೀಗಾಗಿ ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡಬೇಕು ಎಂದರು.

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕೆಲಸ ಮಾಡುವವರಿಗೆ ಮಂತ್ರಿಗಿರಿ ನೀಡಲಿ. ವಿಧಾನಸೌಧದಲ್ಲಿ ಕುಳಿತುಕೊಳ್ಳವರಿಗೆ ಬೇಡ. ಪಕ್ಷಕ್ಕೆ ಬಂದವರಿಗೆ ಸಚಿವ ಸ್ಥಾನ ನೀಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

Key words: Cabinet – expanded- within- this month-MLA- Basanagowda Patil Yatnal