ನವದೆಹಲಿ, ಜುಲೈ,21,2026 (www.justkannada.in): ಡಿಕೆ ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳು ಕಳೆದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ನಾಳೆ ಕರ್ನಾಟಕದ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರುಗಳ ಅಧಿಕಾರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನ ಆಯೋಜಿಸಲಾಗಿದ್ದು ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವ್ಯವಸ್ಥೆಗಾಗಿ ಡಿಪಿಎಆರ್ ಕಾರ್ಯದರ್ಶಿಯಿಂದ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ.

ನವದೆಹಲಿಯಲ್ಲಿ ಇಂದು ಹೈಕಮಾಂಡ್ ನಾಯಕರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗಲಿದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ವೇಳೆಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
Key words: Cabinet expansion, New ministers , oath, tomorrow







