Thursday, September 17, 2026

BDA Apartments

ಸಚಿವ ಸಂಪುಟ ವಿಸ್ತರಣೆ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ..? BD...
Home Front Page ಸಚಿವ ಸಂಪುಟ ವಿಸ್ತರಣೆ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ..?

ಸಚಿವ ಸಂಪುಟ ವಿಸ್ತರಣೆ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ..?

ಬೆಂಗಳೂರು,ಅಕ್ಟೋಬರ್,2,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದು ಈ ನಡುವೆ ಸಂಪುಟ ಸೇರಲು ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಈ ನಡುವೆ ಈ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳುವ ವಿಚಾರದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.jk-logo-justkannada-logo

ಈ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಸಮಯಾವಕಾಶ ಕೇಳಿದ್ದೇನೆ. ಸಮಯ ನೀಡಿದರೇ ದೆಹಲಿಗೆ ತೆರಳುತ್ತೇನೆ. ಅಮಿತ್ ಶಾ  ಸಮಯಾವಕಾಶ ಕೊಟ್ಟ ಬಳಿಕವೇ ದೆಹಲಿಗೆ ತೆರಳುತ್ತೇನೆ ಎಂದಿದ್ದಾರೆ.cabinet-expansion-cm-bs-yeddyurappa-dehl-amith-sha-meet

ಇತ್ತೀಚೆಗೆ ನವದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸಿ ನಂತರ ವಾಪಸ್ ಆಗಿದ್ದರು. ಇದೀಗ ಮತ್ತೆ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಕುರಿತು ಚರ್ಚೆಗೆ ಮುಂದಾಗಿದ್ದಾರೆ.

Key words: Cabinet- expansion -CM BS Yeddyurappa- dehli- amith sha-meet