Tuesday, September 8, 2026

BDA Apartments

Home Front Page ದಾವೋಸ್ ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳುತ್ತೇನೆಂದ ಸಿಎಂ ಬಿಎಸ್ ಯಡಿಯೂರಪ್ಪ…

ದಾವೋಸ್ ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳುತ್ತೇನೆಂದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ನ,13,2020(www.justkannada.in):  ದಾವೋಸ್ ಗೆ ಹೋಗುವ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಂಗಳೂರಿನಲ್ಲಿ  ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಿ ದೆಹಲಿಗೆ ತೆರಳಲು ಪ್ರಯತ್ನಿಸುತ್ತೇನೆ. ಇಲ್ಲವಾದ್ರೆ ಜನವರಿ 17,18 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ. ಆ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ 8 ಮಂದಿಗೆ ಮಾತ್ರ ಸಚಿವ ಸ್ಥಾನ ಎಂಬ ಸುದ್ದಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಶಾಸಕರಿಗೆ ನಾನು ಕೊಟ್ಟಿರುವ ಭರವಸೆಯನ್ನ ಈಡೇರಿಸುತ್ತೇನೆ. ಯಾರೂ ಕೂಡ ಊಹಾಪೂಹಗಳಿಗೆ ಕಿವಿಕೊಡಬೇಡಿ ಎಂದು ಹೇಳಿದರು.

Key words: cabinet- expansion -CM BS Yeddyurappa – Delhi- tomorrow.