Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,15,2026 (www.justkannada.in): ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದುಆಗಸ್ಟ್ 6ರಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ  ಸಚಿವ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದಾರೆ.

ಈ ಮಧ್ಯೆಇಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ.  ಮಧ್ಯಾಹ್ನ 2 ಗಂಟೆಗೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ ಬೆಳೆಸುತ್ತಿದ್ದು ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.  ನಾಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ BDA JK_Adv BDA Adv

ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಫುಟ ವಿಸ್ತರಣೆ  ಕಸರತ್ತು ಜೋರಾಗಿದ್ದು ಮಂತ್ರಿಗಿರಿ ಪಡೆಯಲು ಶಾಸಕರ ಲಾಬಿ ಮುಂದುವರೆದಿದೆ. ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ.ಸಂಪುಟ ವಿಸ್ತರಣೆ ಕಸರತ್ತು jk02_new jk02 new

Key words: Cabinet expansion, CM, DK Shivakumar, Delhi, today