ಈ ತಿಂಗಳ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ-ಸಿಎಂ ಬಿಎಸ್  ಯಡಿಯೂರಪ್ಪ ಭರವಸೆ….

ಹಾಸನ,ಜ,27,2020(www.justkannada.in):  ಸಚಿವ ಸಂಪುಟ ಸೇರಲು ಜಾತಕಪಕ್ಷಿಗಳಂತೆ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ.

ಹೌದು ಈ ತಿಂಗಳ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ,   ಈ ತಿಂಗಳದ ಅಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡುತ್ತೇನೆ. ತಿಂಗಳ ಅಂತ್ಯದೊಳಗೆ ಎಲ್ಲವೂ ಮುಗಿಯಲಿದೆ. ಈ ತಿಂಗಳಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಯಲಿದೆ  ಎಂದು ತಿಳಿಸಿದ್ದಾರೆ.

ಉಪಚುನಾವಣೆ ನಡೆದು ಒಂದುವರೆ ತಿಂಗಳು ಕಳೆದರೂ ಅಂದಿನಿಂದ ಇಲ್ಲಿವರೆಗೆ ಸಂಪುಟ ವಿಸ್ತರಣೆಯನ್ನ ಹಲವು ಅಡೆತಡೆಗಳಿಂದ ಮುಂದಕ್ಕೆ ಹಾಕುತ್ತಲೇ ಬಂದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನ ಈ ತಿಂಗಳೊಳಗೆ ಮುಗಿಸಲು ನಿರ್ಧರಿಸಿದ್ದಾರೆ.

Key words: Cabinet expansion – end – month-CM BS Yeddyurappa