ಸಚಿವ ಸಂಪುಟ ವಿಸ್ತರಣೆ ಇನ್ನೆರೆಡು ಮೂರು ದಿನಗಳಲ್ಲಿ ಫೈನಲ್- ಸಿಎಂ ಬಿಎಸ್ ವೈ ಸ್ಪಷ್ಟನೆ….

ಬೆಂಗಳೂರು,ನವೆಂಬರ್,27,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟು  ಮುಂದುವರೆಯುತ್ತಲೇ ಇದ್ದು ಈ ಮಧ್ಯೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಇನ್ನ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಅಂತಿಮ ಮಾಡುತ್ತೇವೆ ಎಂದು ತಿಳಿಸಿದ್ದಾರೆ.I didn't knew CM BSY will think so cheaply - KPCC President D.K. Shivakumar

ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಈಗಷ್ಟೇ ಅಮಿತ್ ಶಾ ಅವರ ಜತೆ ಮಾತನಾಡಿದ್ದೇನೆ. ಇನ್ನೆರೆಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಫೈನಲ್ ಆಗಲಿದೆ ಎಂದರು. cabinet-expansion-final-two-more-days-cm-bs-yeddyurappa

ಇನ್ನು ಲಿಂಗಾಯಿತರಿಗೆ  ಒಬಿಸಿ ಸ್ಥಾನಮಾನ  ಸಂಬಂಧ ಈಗಲೇ ತೀರ್ಮಾನಿಸಲ್ಲ. ದೆಹಲಿಗೆ ಹೋಗಿ ಬಂದ ಬಳಿಕ ಸಮಾಲೋಚನೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

Key words: Cabinet expansion- final –two- more days- CM BS Yeddyurappa