Sunday, August 16, 2026

BDA Apartments

Home Front Page ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ..

ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ..

ಬೆಂಗಳೂರು,ನವೆಂಬರ್,20,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ವಿಳಂಬ ಹಿನ್ನೆಲೆ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನೀವು ಸಿಎಂನಾದರೂ ಬದಲಾವಣೆ ಮಾಡಿಕೊಳ್ಳಿ ಅಥವಾ ಬೇರೆ ಏನಾದರೂ ಮಾಡಿಕೊಳ್ಳಿ. ಇದೆಲ್ಲ ನಿಮ್ಮ ಪಕ್ಷದ ಹಣೆಬರಹವೆಂದು ಕಿಡಿಕಾರಿದರು.

ಸಚಿವ ಸಂಪುಟ ಸರ್ಕಸ್ ನಲ್ಲಿ ಆಡಳಿತ ಯಂತ್ರ ದಿಕ್ಕೆಟ್ಟಿದೆ. ಶೀಘ್ರದಲ್ಲೇ ಏನಾದರೂ ನಿರ್ಧಾರ ಕೈಗೊಂಡು  ಈಗಿನ ಬಿಕ್ಕಟ್ಟನ್ನು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಡುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಿದರು.

ಹೈಕಮಾಂಡ್ ಸಂಸ್ಕೃತಿ, ಮೂಲ ಹಾಗೂ ವಲಸಿಗರು, ಕುಟುಂಬ ರಾಜಕಾರಣ ಪದ ಪ್ರಯೋಗಿಸಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡಿಕೊಳ್ಳುತ್ತಿದ್ದಾರೆಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ಕಾಲೆಳೆದರು.

Key words: Cabinet Expansion-  Former chief minister- Siddaramaiah -against -government