Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಸಚಿವ ಸಂಪುಟ ವಿಸ್ತರಣೆ ವಿಚಾರ : ಸಚಿವ ಆರ್ .ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ….

ಸಚಿವ ಸಂಪುಟ ವಿಸ್ತರಣೆ ವಿಚಾರ : ಸಚಿವ ಆರ್ .ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ….

ಬೆಂಗಳೂರು,ಜ,24,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಯಾವುದೇ ತಕರಾರು ಇಲ್ಲ. ಸಿಎಂ ಬಿ.ಎಸ್ ಯಡಿಯೂರಪ್ಪ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಆರ್.ಅಶೋಕ್,  ರಾಜೀನಾಮೆ ಕೊಟ್ಟ ನಮ್ಮ ಪಕ್ಷಕ್ಕೆ ಬರವಾಗ ಆದ ಒಪ್ಪಂದದಂತೆ ನಡೆದುಕೊಳ್ಳುತ್ತೇವೆ. ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಚಿವ ಸ್ಥಾನ ನೀಡುತ್ತೆವೆ. ನಾನು ಐದು ಶಾಸಕರ ಜತೆ ಮಾತುಕತೆ ನಡೆಸಿದ್ದೇನೆ.  ಸಿಎಂ ಬಿಎಸ್ ಯಡಿಯೂರಪ್ಪ ವಿದೇಶದಿಂದ ಬಂದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಸಿಎಂ ಬಿಎಸ್ ವೈ ಜೆ.ಪಿ ನಡ್ಡಾ ಅವರ ಜತೆಯೂ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

ಮತ್ತೊಂದು ಡಿಸಿಎಂ ಹುದ್ದೆ ಸೃಷ್ಠಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರ್.ಅಶೋಕ್, ಡಿಸಿಎಂ ವಿಚಾರದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ಚಿಕ್ಕವನು. ದೊಡ್ಡ ವಿಚಾರಗಳ ಬಗ್ಗೆ ನಾನು ಮಾತನಾಡಲ್ಲ ಎಂದು ತಿಳಿಸಿದರು.

Key words: Cabinet expansion- issue-Minister -R. Ashok