ಸಚಿವ ಸಂಪುಟ ವಿಸ್ತರಣೆ ವಿಚಾರ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಕೆ.ಎಸ್ ಈಶ್ವರಪ್ಪ.

ಹಾಸನ, ಅಕ್ಟೋಬರ್,17,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.

ಈ ನಡುವೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಸಚಿವಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತು. ಈ ಬಗ್ಗೆ  ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳತಾರೆ.  ಕೇಂದ್ರ ನಾಯಕರು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಸಚಿವ ಸ್ಥಾನ ಕೊಟ್ಟರೇ ತೆಗೆದುಕೊಳ್ಳುತ್ತೇನೆ ಎಂದರು.

Key words: Cabinet -expansion -KS Eshwarappa – CM’s -decision.