ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್…

ಬೆಂಗಳೂರು, ಜೂ.8,2019(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯ ಸಚಿವ ಸಂಪುಟ ಜೂ.12ರಂದು ವಿಸ್ತರಣೆಯಾಗಲಿದ್ದು, ಅಂದು ಬೆಳಗ್ಗೆ 11:30ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮೂವರು ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿ ಸಮಯ ನಿಗದಿ ಮಾಡಿದ್ದಾರೆ. ಇನ್ನು ಸಚಿವ ಸಂಪುಟ ಸೇರಲಿರುವ ಮೂವರು ಸಚಿವರ ವಿವರ ತಿಳಿದು ಬಂದಿಲ್ಲ. ಈ ವಿಚಾರವನ್ನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೌಪ್ಯತೆ ಕಾಯ್ದುಕೊಂಡಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಶಾಸಕ ಬಿ.ಸಿ ಪಾಟೀಲ್ ಬದಲು ರಾಮಲಿಂಗರೆಡ್ಡಿ ಅವರಿಗೆ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಒಂದು ವೇಳೆ ಅತೃಪ್ತರಿಗೆ ಸಚಿವ ಸ್ಥಾನ ನೀಡಿದರೇ ಕಾಂಗ್ರೆಸ್ ಹಿರಿಯ ನಾಯಕರು ಅತೃಪ್ತರಾಗಿ ಸಿಡಿದೇಳಲಿದ್ದಾರೆಂದು ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

Key words: Cabinet expansion on June 12.

#Bangalore #Cabinet #expansion #alliancegovrnament