Friday, September 18, 2026

BDA Apartments

Home Front Page ಸಚಿವ ಸಂಪುಟದಲ್ಲಿ ಹೊಸತನವಿಲ್ಲ, ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ- ಆರ್.ಅಶೋಕ್

ಸಚಿವ ಸಂಪುಟದಲ್ಲಿ ಹೊಸತನವಿಲ್ಲ, ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ- ಆರ್.ಅಶೋಕ್

ಬೆಂಗಳೂರು,ಆಗಸ್ಟ್,4,2026 (www.justkannada.in):  ಡಿ.ಕೆ ಶಿವಕುಮಾರ್‌ ಅವರ ಹೊಸ ಸಚಿವ ಸಂಪುಟದಲ್ಲಿ ಹೊಸತನವಿಲ್ಲ. ಸಂಪುಟಕ್ಕೆ ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ಮಾತನಾಡಿದ ಆರ್.ಅಶೋಕ್,  ರಾಜ್ಯ ಹಿಂದೆಂದೂ ಕಂಡಿರದ ಸಚಿವ ಸಂಪುಟ ರಚನೆಯಾಗಿದೆ.  ಡಿಕೆ ಶಿವಕುಮಾರ್ ಸಂಪುಟದಲ್ಲಿ  ಭ್ರಷ್ಟಾಚಾರಿಗಳು ತುಂಬಿಕೊಂಡಿದ್ದಾರೆ. ಅನೇಕರು ಪೇಮೆಂಟ್‌ ಮೂಲಕ ಬಂದು ಸೇರಿದ್ದಾರೆ.  ಪರಿಶಿಷ್ಟರ 187 ಕೋಟಿ ರೂ. ಲೂಟಿ ಮಾಡಿ ಚುನಾವಣೆಗೆ ಬಳಸಿರುವುದು ಖಚಿತವಾಗಿದೆ. ಈ ಪ್ರಕರಣದಲ್ಲಿ ಬಿ.ನಾಗೇಂದ್ರ ಜೈಲಿಗೆ ಹೋದರೂ, ಈಗ ಮತ್ತೆ ಅವರಿ ಸಚಿವ ಸ್ಥಾನ ನೀಡಿದ್ದಾರೆ. ಅವರಿಗೆ ಕ್ಲೀನ್ ಚಿಟ್ ಕೊಟ್ಟವರು ಯಾರು? ಎಂದು ಪ್ರಶ್ನಿಸಿದರು.ಸಚಿವ ಸಂಪುಟದಲ್ಲಿ ಹೊಸತನವಿಲ್ಲ oath.jpg123

ಸಂಪುಟ ವಿಸ್ತರಣೆ ಬೆನ್ನಲ್ಲೆ ಅನೇಕ ಕಡೆಗಳ ಕಾಂಗ್ರೆಸ್‌ ಕಾರ್ಯಕರ್ತರೇ ಪ್ರತಿಭಟನೆಗಿಳಿದಿದ್ದಾರೆ.  ಕೈಗೇ ಏನೇನೂ ತೆಗೆದುಕೊಂಡು ಸಿಎಂ ಭಾವಚಿತ್ರಕ್ಕೆ ಹೊಡೆದಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಚಿವ ಸಂಪುಟದಲ್ಲಿ ಹೊಸತನವಿಲ್ಲ. ಇದು ಸಿಎಂ ಡಿ.ಕೆ.ಶಿವಕುಮಾರ್‌ ಅವರ ಪಟ್ಟಿಯಲ್ಲ, ಪೇಮೆಂಟ್‌ ಲಿಸ್ಟ್‌ ಎಂದು ತಿಳಿದುಬಂದಿದೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ jk02_new jk02 new

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದ ಬಗ್ಗೆ ಟೀಕಿಸಿದ ಆರ್.ಅಶೋಕ್, ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸ್ಥಾನ ನೀಡಿಲ್ಲ. ಚುನಾವಣೆಗೆ ಮುನ್ನ ಮಹಿಳೆಯರ ಸಬಲೀಕರಣದ ಬಗ್ಗೆ ಉದ್ದುದ ಮಾತನಾಡಿದ್ದ ಕಾಂಗ್ರೆಸ್‌ ಹೈಕಮಾಂಡ್ ಈಗ ಒಬ್ಬ ಮಹಿಳೆಗೂ ಅವಕಾಶ ನೀಡಿಲ್ಲ. ಇದು ರಾಜ್ಯದ ಮಹಿಳೆಯರಿಗೆ ಮಾಡಿರುವ ದ್ರೋಹ. ಈ ಸರ್ಕಾರ ಇದುವರೆಗೆ ಟೆಕಾಫ್ ಆಗಿಲ್ಲ, ಇನ್ನು ಮುಂದೆಯೂ ಆಗಲ್ಲ ಎಂದು ಕುಟುಕಿದರು.

Key words: Cabinet Expansion, corrupt, R. Ashok