ನಾಳೆ ಸಂಪುಟ ವಿಸ್ತರಣೆ : 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಖಚಿತ- ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ…

ಶಿವಮೊಗ್ಗ,ಫೆ,5,2020(www.justkannada.in):  ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕರಿಸುವುದು ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟ ವಿಸ್ತರಣೆ ಖಚಿತ 13 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎರಡು ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆಗಳ ಹಂಚಿಕೆಯೂ ಅಂತಿಮವಾಗುತ್ತದೆ ಎಂದು ನುಡಿದರು.

ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಈ ವೇಳೆ ಅಸಮಾಧಾನ ಸಹಜ. ಎಲ್ಲವನ್ನೂ ಸಿಎಂ ಬಿಎಸ್ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಾರೆ. ಪಕ್ಷದ ಹೈಕಮಾಂಡ್ ಸಿಎಂ ಬಿಎಸ್ ವೈ ಕೈ ಕಟ್ಟಿ ಹಾಕಿಲ್ಲ ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಕೆಲವರ ಆಕ್ಷೇಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಸರ್ಕಾರ ಬರಲು ಸಿ.ಪಿ ಯೋಗೇಶ್ವರ್ ಪ್ರಮುಖ ಕಾರಣ. ಹೀಗಾಗಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ ಎಂದರು.

Key words:  cabinet expansion- tomorrow-Thirteen -ministers –shivamogga-k.s eshwarappa