ಎರಡು ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಮೈಸೂರು,ಮೇ,11,2022(www.justkannada.in): ರಾಜ್ಯ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆ ಸಂಬಂಧ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚಿಸಿ ಬೆಂಗಳೂರಿಗೆ ವಾಪಸ್ ಆಗಿದ್ದು ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಇನ್ನು ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ತಿರುಗೇಟು ನೀಡಿರುವ ಬಿಎಸ್ ಯಡಿಯೂರಪ್ಪ, ಯಾರು ದುರ್ಬಲರಿದ್ದರೂ ಯಾರು ಭ್ರಷ್ಟರಿದ್ದರೋ ಅಂತವರ ಬಾಯಲ್ಲಿ ಈ ರೀತಿ ಮಾತು ಬರುತ್ತೆ. ಸಿದ್ಧರಾಮಯ್ಯ ಕಾಲದಲ್ಲಿ ಏನಾಯ್ತು ಅಂತಾ ಗೊತ್ತಿದೆ ಎಂದು ಟಾಂಗ್ ನೀಡಿದರು.

Key words: Cabinet-expansion -two – three days-Former CM-BS Yeddyurappa.