ಅಗಸ್ಟ್ 5ರವರೆಗೆ ಸಚಿವ ಸಂಪುಟ ವಿಸ್ತರಣೆ ಅನುಮಾನ..?

ಬೆಂಗಳೂರು,ಆ,1,2019(www.justkannada.in): ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೇರಿರುವ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಅಗಸ್ಟ್ 5ರವರೆಗೆ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಅಗಸ್ಟ್ 5 ರಂದು ಸಿಎಂ  ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಲಿದ್ದು ಅಂದು ಬಿಜೆಪಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನ ಭೇಟಿ ಮಾಡಲಿರುವ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾರು ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ  ಲಾಬಿ ನಡೆಸುತ್ತಿರುವ ಆಕಾಂಕ್ಷಿಗಳು ಅಗಸ್ಟ್ 5ರವರೆಗೆ ಕಾಯಲೇಬೇಕಿದೆ.

 ಸಚಿವ ಸ್ಥಾನಕ್ಕೆ ಒತ್ತಡ ಹೆಚ್ಚಾಗುತ್ತಿರುವುದರಿಂದ ಬಿಎಸ್‌ವೈಗೆ ಹೊಸ ತಲೆನೋವು ಶುರುವಾಗಿದ್ದು, ಈ ವಿಚಾರ ಹೈಕಮಾಂಡ್‌ ನಾಯಕರಿಗೆ ಬಿಟ್ಟದ್ದು, ನಾನು ಈ ವಿಷಯದಲ್ಲಿ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಸಾಧ್ಯವಿಲ್ಲ  ಎಂದು ಸಚಿವಾಕಾಂಕ್ಷಿಗಳಿಗೆ ಹೇಳುತ್ತಿದ್ದಾರೆ ಎನ್ನಲಾಗಿದೆ.

Key words: cabinet- expansion -until -August 5- Doubt