ಮೂರು ದಿನಗಳೊಳಗೆ ಸಂಪುಟ ವಿಸ್ತರಣೆ: ಸೋತವರಿಗೆ ಮಂತ್ರಿಗಿರಿ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ….

ಬೆಂಗಳೂರು,ಜ,24,2020(www.justkannada.in):  ಸಚಿವ ಸ್ಥಾನಕ್ಕಾಗಿ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ವಿದೇಶದಿಂದ ಬಂದ ಬೆನ್ನಲ್ಲೆ ಸಿಹಿಸುದ್ದಿ ನೀಡಿದ್ದಾರೆ.

ಇನ್ನು ಮೂರು ದಿನಗಳೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕಳೆದ ಐದು ದಿನಗಳ ಹಿಂದೆ ದಾವೋಸ್ ಪ್ರವಾಸಕ್ಕೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಸ್ಸಾದರು. ವಾಪಸ್ಸಾದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಮೂರು ದಿನಗಳೋಳಗೆ ಸಂಪುಟ ವಿಸ್ತರಣೆ ಮಾಡುತ್ತೇನೆ. ಅಮಿತ್ ಶಾ ಜತೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುತ್ತೇನೆ ಎಂದರು.

ನಾನು ದೆಗಲಿಗೆ ಹೋಗುವ ಅಗತ್ಯವಿಲ್ಲ.ನಾಳೆ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಹೀಗಾಗಿ ಅವರ ಬಳಿ ಚರ್ಚಿಸುತ್ತೇನೆ. ಹಾಗೆಯೇ  ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ. ಗೆದ್ದವರ ಬಗ್ಗೆ ಮಾತ್ರ ಚರ್ಚೆ ಸೋತವರ ಬಗ್ಗೆ ಮಾತೇ ಇಲ್ಲ ಎಂದು ತಿಳಿಸಿದರು.

Key words: Cabinet expansion -within -three days-CM BS Yeddyurappa