ಬೆಂಗಳೂರು,ಜೂನ್,18,2025 (www.justkannada.in): ನಾಳೆ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಸ್ಥಳಾಂತರವಾಗಿದೆ.
ನಾಳೆ ಜೂನ್ 19ರಂದು ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್ ಆಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗಾಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
Key words: Nandi Hills, Cabinet Meeting, Shift, Vidhanasoudha