ಸಚಿವರು ಮತ್ತು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…

ಬೆಂಗಳೂರು,ಜೂ,25,2020(www.justkannada.in): ಸಚಿವರು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ಕೊರೋನಾ ನಿಯಂತ್ರಣ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಪದ್ಮಪ್ರಶಸ್ತಿಗಳ ಆಯ್ಕೆಗೆ  ಸಿಎಸ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ನಡುವೆ  2012ರಿಂದಲೂ ಬಾಕಿ ಉಳಿದಿರುವ ಮನೆಗಳ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಲಾಗಿದ್ದು  9.74 ಲಕ್ಷ ಮನೆಗಳ ನಿರ್ಮಾನಕ್ಕೆ ಸಭೆಯಲ್ಲಿ ಒಪ್ಪಿಗೆ  ದೊರೆತಿದೆ. ಇದಕ್ಕೆ 10 ಸಾವಿರ ಅನುದಾನ ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.Cabinet –meeting-approves -30% pay cut-ministers -MLAs

ಇನ್ನು ಸಚಿವರು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

Key words: Cabinet –meeting-approves -30% pay cut-ministers -MLAs