ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ಅಮಾನತು ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣ ಸಂಬಂಧ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ರಾಜ್ಯಪಾಲರು ಅಮಾನತು ಮಾಡಿದ್ದರು.
ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. 7 ದಿನದೊಳಗೆ ಶಿವಶಂಕರಪ್ಪ ಅವರನ್ನ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ಅಮಾನತು ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ.
Key words: Cabinet meeting, , recommend, , Governor, suspension ,KPSC chairman







