Sunday, August 9, 2026

BDA Apartments

Home Front Page ಇಂದು ರಾಜ್ಯ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನ.

ಇಂದು ರಾಜ್ಯ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನ.

ಬೆಳಗಾವಿ,ಡಿಸೆಂಬರ್,29,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಸಮುದಾಯದ ರಾಜಕೀಯ ಮುಖಂಡರು ಜಯಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬಗ್ಗೆ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ  ನಡೆಯಲಿದ್ದು ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದರು. ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.

Key words: Cabinet-meeting –today-Final decision – reservation – 2A – Panchmasali